ದಿನಾಂಕ:29-03-2026(ಹಾಯ್ ಉಡುಪಿ ನ್ಯೂಸ್)
ಉಡುಪಿ : ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಶ್ರೀ ಚಂದ್ರ ಶೆಟ್ಟಿ ಅವರು ತಮ್ಮ ಸೇವೆಗೆ ಈ ಗೌರವ ಪಡೆದಿದ್ದಾರೆ.
ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಎಚ್‌ಸಿ ಶ್ರೀ ಸಂತೋಷ್ ಶೆಟ್ಟಿ ಅವರು ಕರಾವಳಿ ಕಾವಲು ವಿಭಾಗದಲ್ಲಿ ನೀಡಿದ ವಿಶಿಷ್ಠ ಸೇವೆಗಾಗಿ ಚಿನ್ನದ ಪದಕ ಪಡೆದಿದ್ದಾರೆ.
ನಕ್ಸಲ್ ನಿಗ್ರಹ ಪಡೆ, ಕಾರ್ಕಳದಲ್ಲಿ ಸೇವೆ ಸಲ್ಲಿಸುತ್ತಿರುವ ಆರ್‌ಎಸ್‌ಐ ಶ್ರೀ ಮಂಜುನಾಥ ದೇವರಮನೆ ಅವರು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೋರಿದ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪದಕ ಪುರಸ್ಕೃತರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಕರಾವಳಿ ಕಾವಲು ಪಡೆ ಮತ್ತು ನಕ್ಸಲ್ ನಿಗ್ರಹ ಪಡೆಯ ಪ್ರಭಾರ ಎಸ್‌ಪಿ ಶ್ರೀ ಹರಿರಾಮ್ ಶಂಕರ್. ಐಪಿಎಸ್ ಅವರು ಅಭಿನಂದಿಸಿದ್ದಾರೆ.
