ದಿನಾಂಕ:02-04-2026 (ಹಾಯ್ ಉಡುಪಿ ನ್ಯೂಸ್)
ವಿಜಯಪುರ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನಾನು ಮುಖ್ಯಮಂತ್ರಿಯಾಗಿ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ, ಇವರ ಹೊರತಾಗಿ ಮರಾಠರು, ಬ್ರಾಹ್ಮಣರು, ಕ್ಷತ್ರೀಯರು ಸೇರಿದಂತೆ ಅನೇಕರು ಅಲ್ಪಸಂಖ್ಯಾತರು ಇದ್ದಾರೆ ,ಅವರಿಗೆಲ್ಲ ಅಲ್ಪಸಂಖ್ಯಾತ ಸ್ಥಾನಮಾನ ಕೊಡುತ್ತೇನೆ ಎಂದರು.
ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಇಂದು ಹನುಮ ಜಯಂತಿ. ಹನುಮಂತನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಹೇಳಲ್ಲ. ಅಪ್ಪ-ಮಗನನ್ನು ಕೈಬಿಟ್ಟು ಅವರಾಗಿಯೇ ನನ್ನನ್ನು ಬಿಜೆಪಿಗೆ ಬರುವಂತೆ ಆಹ್ವಾನಿಸುತ್ತಾರೆ. ಬಳಿಕ ಸಿಎಂ ಆಗಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ರೀತಿ ರಾಜ್ಯಭಾರ ಮಾಡುತ್ತೇನೆ ಎಂದು ಹೇಳಿದರು.
ಇನ್ನು ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನನ್ನ ಆತ್ಮೀಯರು. ಅವರ ಪರ ಪ್ರಚಾರ ಮಾಡುವಂತೆ ಬಿಜೆಪಿ ಕಾರ್ಯಕರ್ತರು ನನ್ನನ್ನು ಕರೆದಿದ್ದಾರೆ. ಅದಕ್ಕಾಗಿ ನಾನು ಚಿರಂತಿಮಠ ಅವರ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದರು.
