
ದಾವಣಗೆರೆ: ದಿನಾಂಕ:02-04-2026(ಹಾಯ್ ಉಡುಪಿ ನ್ಯೂಸ್)
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಇಂದು ದಾವಣಗೆರೆಯಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಖಚಿತ ಎಂದರು.
ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿದ ಡಿ ಕೆ ಅವರು ಶಾಮನೂರು ಶಿವಶಂಕರಪ್ಪ ಅವರ ಜನಪರ ಸೇವೆ ಹಾಗೂ ಅಭಿವೃದ್ಧಿ ಕಾರ್ಯಗಳೇ ಕಾಂಗ್ರೆಸ್ ಗೆಲುವಿಗೆ ಮುನ್ನುಡಿ ಎಂದರು.
ಕ್ಷೇತ್ರದ ಮತದಾರರು ಸಮರ್ಥ್ ಶಾಮನೂರುಗೆ ತಮ್ಮ ಅಮೂಲ್ಯವಾದ ಮತ ನೀಡಿ “ಕೈ” ಯನ್ನು ಮತ್ತಷ್ಟು ಬಲಪಡಿಸಬೇಕೆಂಬುದು ಮನವಿ ಮಾಡಿದರು.
