Spread the love

ಉಡುಪಿ: ಮೇ ೧೪(ಹಾಯ್ ಉಡುಪಿ ನ್ಯೂಸ್) ಶ್ರೀ ಕೃಷ್ಣ ದರ್ಶನಕ್ಕೆಂದು ಬಂದಿದ್ದ ಭಕ್ತಾದಿಗಳ ಚಿನ್ನಾಭರಣ ಕಳವಾದ ಘಟನೆ ನಡೆದಿದೆ.

, ಅತ್ತಿಬೆಲೆ, ಸಿಟಿ ಟೋಲ್ ಗೇಟ್ ಬಳಿ ನಿವಾಸಿ ಷಣ್ಮುಗಂ (೪೧) ಇವರು ತನ್ನ ಸಂಸಾರದೊಂದಿಗೆ ದಿನಾಂಕ 13/05/2022 ರಂದು ಸಂಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದು, ತದನಂತರ 04:46 ಗಂಟೆಗೆ ಕೃಷ್ಣಮಠದ ವಸಂತ ಮಂಟಪದ ಬಳಿ ತೊಟ್ಟಿಲು ಸೇವೆ ನಡೆಯುತ್ತಿದ್ದು, ದೇವರ ಆರತಿ ಯನ್ನು ಪಡೆಯುತ್ತಿರುವಾಗ ಯಾರೋ ಕಳ್ಳರು ಷಣ್ಮುಗಂ ಅವರ ಹೆಂಡತಿಯ ವ್ಯಾನಿಟಿ ಬ್ಯಾಗ್ ನ ಜಿಪ್ಪನ್ನು ತೆರೆದಿದ್ದು ಅದರೊಳಗಿದ್ದ ಚಿನ್ನಾಭರಣ ಹಾಕಿದ್ದ ಬಾಕ್ಸ್‌ ನ್ನು ಕಳವು ಮಾಡಿದ್ದು, ಬಾಕ್ಸ್‌ ನಲ್ಲಿ 58 ಗ್ರಾಂ ತೂಕದ ಬಳೆಗಳು-2, 16 ಗ್ರಾಂ ತೂಕದ ಕಿವಿಯೊಲೆ-2, 13 ಗ್ರಾಂ ತೂಕದ ಮಗುವಿನ ಚಿಕ್ಕ ಬಳೆ-1, 20 ಗ್ರಾಂ ತೂಕದ ಪೆಂಡೆಂಟ್‌ ಇರುವ ಚಿನ್ನದ ಸರ -1, 48 ಗ್ರಾಂ ತೂಕದ ದೊಡ್ಡ ಚಿನ್ನದ ಸರ -1 ಒಟ್ಟು 155 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳವಾದ ಚಿನ್ನಾಭರಣಗಳ ಒಟ್ಟು ಅಂದಾಜು ಮೌಲ್ಯ ರೂಪಾಯಿ 6,30,000/- ಎನ್ನಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.  

error: No Copying!