IMG-20260404-WA0068-1152x1536.jpg
Spread the love

ಉಡುಪಿ:  ದಿನಾಂಕ:04-04-2026(ಹಾಯ್ ಉಡುಪಿ ನ್ಯೂಸ್) ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ  ಗಣೇಶ್ ಪೂಜಾರಿ (48) ಎಂಬವನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ, ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಏಪ್ರಿಲ್ 4, 2026 ರಂದು ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದಾರೆ.

ರೌಡಿ ಗಣೇಶ್ ಪೂಜಾರಿಯು ಕಾರ್ಕಳ ತಾಲೂಕಿನ ಕೌಡೂರು ಗ್ರಾಮದವರು.ಆರೋಪಿ ಗಣೇಶ್ ಪೂಜಾರಿಯ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ 4, ದರೋಡೆ 1, ಹಲ್ಲೆ 3, ಅಕ್ರಮ ಕೂಟ 1, ಜೂಜಾಟ 1 ಸೇರಿದಂತೆ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ 1ರಲ್ಲಿ ಶಿಕ್ಷೆ ವಿಧಿಸಲಾಗಿದ್ದು, 7 ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದಾರೆ. ಒಂದು ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಉಳಿದ 2 ಪ್ರಕರಣಗಳು ತನಿಖೆಯಲ್ಲಿವೆ.

ಬಂಧಿತನನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಅಧಿಕಾರಿಗಳು ಆದೇಶಿಸಿದ್ದಾರೆ.

error: No Copying!