IMG_20260408_000701.jpg
Spread the love

ಉಡುಪಿ: ದಿನಾಂಕ :07-04-2026(ಹಾಯ್ ಉಡುಪಿ ನ್ಯೂಸ್) ಇಂದ್ರಾಳಿ ರೈಲ್ವೆ ನಿಲ್ದಾಣದ  ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಉತ್ತರ ಕನ್ನಡ,ಅಂಕೋಲ ನಿವಾಸಿ,ಪ್ರಭವ ನಾಗೇಶ ನಾಯಕ (32) ಎಂಬವರ KA-09-EK-2817 ನೇ ಕಪ್ಪು ಬಣ್ಣದ ಹಿರೋ-ಹೊಂಡಾ ಸ್ಲ್ಪೆಂಡರ್ ಪ್ಲಸ್ ಮೋಟಾರ್ ಸೈಕಲ್ ನ್ನು ದಿನಾಂಕ 27/03/2026 ರಂದು ರಾತ್ರಿ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ರೈಲ್ವೇ ನಿಲ್ದಾಣದ ಮುಂದೆ ಇರುವ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ರೈಲಿನಲ್ಲಿ ಮುಂಬಯಿಗೆ ಹೋಗಿರುತ್ತಾರೆ. ದಿನಾಂಕ 31/03/2026 ರಂದು ಬೆಳಿಗ್ಗೆ 08:30 ಗಂಟೆಗೆ ಅಂಕೋಲಾ ದಿಂದ ಉಡುಪಿ ರೈಲ್ವೇ ನಿಲ್ದಾಣಕ್ಕೆ ರೈಲಿನಲ್ಲಿ ಬಂದು ಅವರು ಮೋಟಾರ್ ಸೈಕಲ್ ನ್ನು ನಿಲ್ಲಿಸಿದ್ದ ಸ್ಥಳಕ್ಕೆ ಬಂದು ನೋಡಿದಾಗ ಮೋಟಾರ್ ಸೈಕಲ್ ನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ  ಕಲಂ: 303(2) BNS ರಂತೆ ಪ್ರಕರಣ ದಾಖಲಾಗಿದೆ.

error: No Copying!