Screenshot_2026-04-12-11-15-28-088_com.miui_.gallery-edit-1024x266.jpg
Spread the love

ದಿನಾಂಕ :12-04-2026(ಹಾಯ್ ಉಡುಪಿ ನ್ಯೂಸ್)

ಮಣಿಪಾಲ: ಕೆ.ಎಂ.ಸಿ ಆಸ್ಪತ್ರೆಯ ಸನಿಹದಲ್ಲಿ ನಡೆದಿದ್ದ ಅಪಹರಣ ಪ್ರಕರಣವನ್ನು ಮಣಿಪಾಲ ಪೊಲೀಸರು ಭೇದಿಸಿ, ತೆಲಂಗಾಣದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮಾರ್ಚ್ 31ರಂದು ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆ ಬಳಿ ಟೀ ಕುಡಿಯುತ್ತಿದ್ದ ವೇಳೆ, ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದ 7-8 ಮಂದಿ, ರಾಜೇಶ್ ಎಂಬವರನ್ನು ಬಲವಂತವಾಗಿ ಅಪಹರಿಸಿಕೊಂಡು ಹೋಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆಗಾಗಿ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತಂಡವು ತೆಲಂಗಾಣ ರಾಜ್ಯದ ಕರೀಂನಗರ ಜಿಲ್ಲೆಯ ಗೋವಿಂದಪಳ್ಳಿ ಪ್ರದೇಶದ ಲಾಡ್ಜ್‌ನಲ್ಲಿ ಏಪ್ರಿಲ್ 9ರಂದು ಮುಂಜಾನೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಬಂಧಿತರಿಂದ ಅಪಹರಣಕ್ಕೆ ಬಳಸಿದ ಕಿಯಾ ಕಾರು ಹಾಗೂ ಮಹೀಂದ್ರ ಥಾರ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

error: No Copying!