ಕುಂದಾಪುರ: ದಿನಾಂಕ 18-04-2026(ಹಾಯ್ ಉಡುಪಿ ನ್ಯೂಸ್) ಕಸಬಾ ಗ್ರಾಮದ ಉದಯ ಪೂರ್ಣಿಮಾ ಹೋಟೆಲ್ ನ ಗೂಡಂಗಡಿ ಬಳಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ನಂಜಾ ನಾಯ್ಕ್ ಎನ್ ಅವರು ಬಂಧಿಸಿದ್ದಾರೆ.
ಕುಂದಾಪುರ ಠಾಣಾ ಸಿಬ್ಬಂದಿ ಮತ್ತು ಬೀಟ್ ಸಿಬ್ಬಂದಿಯವರಿಗೆ ದಿನಾಂಕ:16-04-2026 ರಂದು ಕುಂದಾಪುರ ತಾಲೂಕು ಕಸಬಾ ಗ್ರಾಮದ ಉದಯ ಪೂರ್ಣಿಮಾ ಹೋಟೇಲ್ ನ ಗೂಡಂಗಡಿಯ ಬಳಿ ಮಟ್ಕಾ ಜುಗಾರಿ ಆಡುತ್ತಿರುವುದಾಗಿ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ .
ಸಾರ್ವಜನಿಕ ಮಾಹಿತಿಯಂತೆ ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ನಂಜಾನಾಯ್ಕ್ ಎನ್ ರವರು ಸಿಬ್ಬಂದಿಯವರೊಂದಿಗೆ ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ದಾಳಿ ನಡೆಸಿ ಅಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ವ್ಯಕ್ತಿಯಾದ ಗೋಪಾಲ ದೇವಾಡಿಗ ಎಂಬವನನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ .
ಗೋಪಾಲ ದೇವಾಡಿಗನನ್ನು ಪೊಲೀಸರು ವಿಚಾರಣೆ ನಡೆಸಿದಾಗ, ಸಾರ್ವಜನಿಕರನ್ನು ಸೇರಿಸಿಕೊಂಡು 00 ಯಿಂದ 99 ವರೆಗಿನ ನಂಬರ್ ಗೆ ಹಣವನ್ನು ಪಣವಾಗಿ ಇಟ್ಟು ಮಟ್ಕಾ ಜುಗಾರಿ ಆಟ ಆಡುತ್ತಿರುವುದಾಗಿ ತಿಳಿಸಿದ್ದು. ಸಂಗ್ರಹಿಸಿದ ಹಣವನ್ನು ಚಂದ್ರ ಎಂಬವನಿಗೆ ನೀಡುತ್ತಿರುವುದಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಆರೋಪಿಯನ್ನು ಬಂಧಿಸಿ ಆತ ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ನಗದು ರೂ 750/- ರೂಪಾಯಿ ಹಾಗೂ ಮಟ್ಕಾ ಸಂಖ್ಯೆ ಬರೆದ ಚೀಟಿ-1, ಮಟ್ಕಾ ಬರೆಯಲು ಉಪಯೋಗಿಸಿದ ಬಾಲ್‌ಪೆನ್ನು-1 ಸ್ವಾಧೀನಪಡಿಸಿಕೊಂಡು ಕಾನೂನು ಬಾಹಿರವಾಗಿ ಮಟ್ಕಾ ಜುಗಾರಿ ಆಟ ಆಡಿ ಅಪರಾಧ ಮಾಡಿರುವುದರಿಂದ ಆಪಾದಿತ ಗೋಪಾಲ ದೇವಾಡಿಗ ನನ್ನು ಬಂಧಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕಲಂ 112 BNS 78(I)(III) KP ACT ರಂತೆ ಪ್ರಕರಣ ದಾಖಲಾಗಿದೆ.
