IMG_20260419_151313.png
Spread the love

ದಿನಾಂಕ:19-04-2026(ಹಾಯ್ ಉಡುಪಿ ನ್ಯೂಸ್)

ಉಡುಪಿ: ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ 21 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅವರು ಅಲ್ಪಕಾಲದ ಅಸೌಖ್ಯ ದಿಂದ ಇಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ಮತ್ತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಹಿರಿಯ ಉಪಸಂಪಾದಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.

error: No Copying!