acnyptr_300426_1-1.jpg
Spread the love

ದಿನಾಂಕ:30-04-2026(ಹಾಯ್ ಉಡುಪಿ ನ್ಯೂಸ್)

ಮಂಗಳೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬುಧವಾರ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 23 ವರ್ಷದ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಹಿಂಬದಿ ಸವಾರೆ ನೇಹಾ (23) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತನನ್ನು ಕಾರ್ತಿಕ್ (23) ಎಂದು ಗುರುತಿಸಲಾಗಿದೆ. ನೇಹಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ವರದಿಗಳ ಪ್ರಕಾರ, ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಗುಂಪೊಂದು ಪರಿಚಯಸ್ಥರ ಮದುವೆಗೆ ಹೋಗಿ ದ್ವಿಚಕ್ರ ವಾಹನಗಳಲ್ಲಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಡಿಕ್ಕಿಯ ಪರಿಣಾಮ ಸವಾರ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

error: No Copying!