IMG_20260504_165247.jpg
Spread the love

ದಿನಾಂಕ:04-05-2026(ಹಾಯ್ ಉಡುಪಿ ನ್ಯೂಸ್)

ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು

ಏಪ್ರಿಲ್ 9 ರಂದು ಉಪಚುನಾವಣೆ ನಡೆದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಆಡಳಿತಾರೂಢ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಎಚ್ ವೈ ಮೇಟಿ ಅವರ ಪುತ್ರ ಉಮೇಶ್ ಮೇಟಿ 98,919 ಮತಗಳನ್ನು ಪಡೆದರೆ, ಮಾಜಿ ಶಾಸಕ ಮತ್ತು 2023 ರಲ್ಲಿ ಪರಾಜಿತ ಅಭ್ಯರ್ಥಿಯಾಗಿದ್ದ ಬಿಜೆಪಿಯ ವೀರಭದ್ರಯ್ಯ ಚರಂತಿಮಠ 76,587 ಮತಗಳನ್ನು ಪಡೆದರು.

2023 ರ ವಿಧಾನಸಭಾ ಚುನಾವಣೆಯಲ್ಲಿ, ಬಾಗಲಕೋಟೆಯಲ್ಲಿ ಎಚ್ ವೈ ಮೇಟಿ ಬಿಜೆಪಿಯ ಚರಂತಿಮಠ ಅವರನ್ನು 5,878 ಮತಗಳ ಅಂತರದಿಂದ ಸೋಲಿಸಿದ್ದರು.

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಶಾಮನೂರು  ಗೆಲುವು;

ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್‌ ಶಾಮನೂರು ಕೊನೆಗೂ ಪ್ರಯಾಸದ ಗೆಲುವು ದಾಖಲಿಸಿದ್ದಾರೆ.

ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಶಾಮನೂರು ಅವರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ವಿರುದ್ಧ 4967 ಮತಗಳ ಅಂತರದಿಂದ ಗೆದ್ದಿದ್ದು, 20ನೇ ಸುತ್ತಿನ ಎಣಿಕೆ ಬಳಿಕ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.

error: No Copying!