ಬ್ರಹ್ಮಾವರ: ದಿನಾಂಕ 09.05.2026 (ಹಾಯ್ ಉಡುಪಿ ನ್ಯೂಸ್)ವಾರಂಬಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಬ್ರಹ್ಮಾವರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾದ ಜಯಕರ.ಎ . ಅವರು ಬಂಧಿಸಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾದ ಜಯಕರ, ಎ.ಅವರು ದಿನಾಂಕ :08-05-2026 ರಂದು ಕರ್ತವ್ಯದಲ್ಲಿದ್ದಾಗ ವಾರಂಬಳ್ಳಿ ಗ್ರಾಮದ ಬೀಟ್ ಸಿಬ್ಬಂದಿ ರಾಘವೇಂದ್ರ ಹಾಗೂ ಚಾಂತಾರು ಗ್ರಾಮದ ಬೀಟ್ ಸಿಬ್ಬಂದಿ ಪ್ರದೀಪ ಆಲಿಪುರ ರವರು ಕರೆ ಮಾಡಿ ವಾರಂಬಳ್ಳಿ ಗ್ರಾಮದ ಬಸ್ ನಿಲ್ದಾಣದ ಸಮೀಪ ಕೀರ್ತಿ ಲಾಡ್ಜ್ ಇರುವ ಕಟ್ಟಡದ ಬದಿಯ ಓಣಿಯಲ್ಲಿ ಸಾರ್ವಜಿನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಜನರನ್ನು ಸೇರಿಸಿಕೊಂಡು ಮಟ್ಕಾ ಜುಗಾರಿ ಆಟಕ್ಕಾಗಿ ಹಣವನ್ನು ಸಂಗ್ರಹಿಸುತ್ತಿರುವ ಬಗ್ಗೆ ಮಾಹಿತಿ ತಿಳಿಸಿದ ಮೇರೆಗೆ ಕೂಡಲೇ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದಾಗ 1 ನೇ ಆರೋಪಿ ಚಂದ್ರಶೇಖರ ಎಂಬವನು ರಸ್ತೆಯಲ್ಲಿ ಹೋಗುತ್ತಿದ್ದ ಜನರನ್ನು ಕೂಗಿ ಕರೆದು 00 ರಿಂದ 99 ರ ಒಳಗಿನ ನಂಬರ್‌ಗೆ ಜನರಿಂದ 1 ರೂಪಾಯಿಗೆ 70 ರೂಪಾಯಿ ನೀಡುವುದಾಗಿ ಹೇಳಿ ಹಣವನ್ನು ಸಂಗ್ರಹಿಸಿ ಚೀಟಿಯಲ್ಲಿ ಬರೆಯುತ್ತಿದ್ದು, ಆತನು ಮಟ್ಕಾ ಜುಗಾರಿ ಆಟಕ್ಕಾಗಿ ಜನರಿಂದ ಹಣವನ್ನು ತೆಗೆದುಕೊಳ್ಳುತ್ತಿದ್ದು , ಪೊಲೀಸರು ದಾಳಿ ನಡೆಸಿದಾಗ ಅಲ್ಲಿ ಸೇರಿರುವ ಜನರು ಓಡಿ ಹೋಗಿದ್ದು ಪೊಲೀಸರು ಆರೋಪಿ ಚಂದ್ರಶೇಖರ್ ನನ್ನು ಹಿಡಿದು ವಶಕ್ಕೆ ಪಡೆದು ಬಂಧಿಸಿ ವಿಚಾರಣೆ ನಡೆಸಿದಾಗ ತಾನು ಸಾರ್ವಜನಿಕರಿಂದ ಅದೃಷ್ಟದ ಆಟ ಮಟ್ಕಾ ಜುಗಾರಿ ಬಗ್ಗೆ ಸಂಗ್ರಹಿಸಿದ ಹಣದಲ್ಲಿ ಸ್ವಲ್ಪ ಹಣ ಇಟ್ಟುಕೊಂಡು ಉಳಿದ ಹಣವನ್ನು ಒಟ್ಟು ಮಾಡಿ 2ನೇ ಆರೋಪಿ ಮಲ್ಪೆಯ ಕಿಶೋರ್ ಎಂಬವನಿಗೆ ನೀಡುವುದಾಗಿ ತಿಳಿಸಿದ್ದಾನೆ .
ಪೊಲೀಸರು 1ನೇ ಆರೋಪಿ ಚಂದ್ರಶೇಖರನ ವಶದಲ್ಲಿದ್ದ ಮಟ್ಕಾ ಜುಗಾರಿ ಬಗ್ಗೆ ಸಂಗ್ರಹಿಸಿದ ನಗದು ಹಣ ರೂ. 740/- ಹಾಗೂ ಮಟ್ಕಾ ನಂಬ್ರಗಳನ್ನು ಬರೆದಿರುವ ಚೀಟಿ-1, ಮಟ್ಕಾ ನಂಬ್ರಗಳನ್ನು ಬರೆಯಲು ಉಪಯೋಗಿಸುವ ಬಾಲ್‌ಪೆನ್-1 ಅನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕಲಂ: 112 BNS & 78(I) (III) KP ACT ರಂತೆ ಪ್ರಕರಣ ದಾಖಲಾಗಿದೆ.
