ದಿನಾಂಕ:13-05-2026 (ಹಾಯ್ ಉಡುಪಿ ನ್ಯೂಸ್)
ಮಣಿಪಾಲ: ಯುವಕನೊಬ್ಬ ತನ್ನ ಹುಚ್ಚು ಪ್ರೀತಿ ಯನ್ನು ಒಪ್ಪದ ಯುವತಿಗೆ ಚೂರಿಯಿಂದ ಇರಿದು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಮಣಿಪಾಲದ ಶಾಂತಿನಗರ ಎಂಬಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ.
ಯುವಕನಿಂದ ಚೂರಿ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿರುವ ಅಂಕೋಲ ಮೂಲದ ಯೋಗೀತಾ (23) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯುವತಿ ಶಾಂತಿನಗರದ ಐಡಿಯಲ್ ಬಿಲ್ಡಿಂಗ್‌ನಲ್ಲಿರುವ ಮಹಿಳಾ ಪಿಜಿಯಲ್ಲಿ ವಾಸವಾಗಿದ್ದು, ಆಕೆಯನ್ನು ಆರೋಪಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಯೋಗೀತಾ ಆತನ ಪ್ರೀತಿಯನ್ನು ನಿರಾಕರಿಸಿದ್ದು, ಇದರಿಂದ ಕೋಪಗೊಂಡ ಆರೋಪಿ ಯುವಕ ಆಕೆಗೆ ಚೂರಿಯಿಂದ ಇರಿದು ಪರಾರಿ ಯಾಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
