images-15.jpeg
Spread the love

ಉಡುಪಿ: ದಿನಾಂಕ 18/05/2026 (ಹಾಯ್ ಉಡುಪಿ ನ್ಯೂಸ್) ಕುಂಜಿಗುಡ್ಡೆಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದಲ್ಲಿಗೆ  ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಭರತೇಶ್ ಕಂಕಣವಾಡಿ ಅವರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಭರತೇಶ್ ಕಂಕಣವಾಡಿ ಅವರು ದಿನಾಂಕ:17-05-2026 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಅಂಬಲಪಾಡಿ ಗ್ರಾಮದ ಅಂಬೇಡ್ಕರ್ ಭವನದ ಹಿಂದಿನ ಕುಂಜಿಗುಡ್ಡೆ ರಸ್ತೆಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಬಳಿಯಿರುವ ಸಾರ್ವಜನಿಕ ಸ್ಥಳದಲ್ಲಿ ನಾಲ್ಕೈದು ಜನರು ಗುಂಪು ಸೇರಿ ಇಸ್ಪೀಟು ಜುಗಾರಿ ಆಟ ಆಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಬಂದಂತೆ ದಾಳಿ ನಡೆಸಿದ್ದಾರೆ .

ದಾಳಿ ನಡೆಸಿದಾಗ ಸ್ಥಳದಲ್ಲಿ ಅಂದರ್‌-ಬಾಹರ್‌ ಇಸ್ಪೀಟು ಜುಗಾರಿ ಆಟವಾಡುತ್ತಿದ್ದ 1)ಸಿದ್ದಣ್ಣ ರೆಡ್ಡಿ (55), 2) ಅಶೋಕ್‌ ದೊರೆ (38), 3)ಪ್ರಭು(36), 4) ಶೇಖಪ್ಪ (31), 5)ಈರಣ್ಣ (24) ಎಂಬವರನ್ನು ಬಂಧಿಸಿ ವಶಕ್ಕೆ ಪಡೆದು ಅವರುಗಳು ಆಟಕ್ಕೆ ಬಳಸಿದ ಒಟ್ಟು ನಗದು ಹಣ 710/- ರೂಪಾಯಿ, ಟವೆಲ್ ಮತ್ತು ಇಸ್ಪೀಟು ಎಲೆಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ  ಕಲಂ: 87 KP act ರಂತೆ ಪ್ರಕರಣ ದಾಖಲಾಗಿದೆ.

error: No Copying!