20260519_233848.jpg
Spread the love

ಬೆಂಗಳೂರು: ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸುತ್ತಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ‌ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. ಸಶಕ್ತ, ಸಮೃದ್ಧ, ಸ್ವಾಭಿಮಾನಿ ಕರ್ನಾಟಕದ ಮರುನಿರ್ಮಾಣ ಕಾರ್ಯದಲ್ಲಿ ಬಹಳಷ್ಟು ದೂರ ಕ್ರಮಿಸಿದ್ದೇವೆ, ನಮ್ಮ ಈ ಪ್ರಯತ್ನ ಮುಂದೆ ಇನ್ನಷ್ಟು ಶೀಘ್ರ ಹಾಗೂ ಪರಿಣಾಮಕಾರಿಯಾಗಿರಲಿದೆ.

ಈ ಮೂರು ವರ್ಷಗಳಲ್ಲಿ ನಿಮಗಾಗಿ ನಾವು ಸಲ್ಲಿಸಿದ ಸೇವೆಯ ಮಾಹಿತಿ ಹೀಗಿದೆ..

– ತುಂಗಭದ್ರಾ ಅಣೆಕಟ್ಟೆಯ ಎಲ್ಲಾ 33 ಗೇಟುಗಳನ್ನು ಬದಲಾಯಿಸಿ ಹೊಸ ಗೇಟುಗಳನ್ನು ಅಳವಡಿಸುವ ಕಾರ್ಯ ನಿಗದಿತ ಅವಧಿಯೊಳಗೆ ಪೂರ್ಣ

– ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಕಾಮಗಾರಿಗೆ ಚಾಲನೆ

– ಗೂಗಲ್‌ ಬ್ರಿಡ್ಜ್‌ ಕಂ ಬ್ಯಾರೇಜ್‌ನಿಂದ ಗಣೇಕಲ್‌ ಸಮತೋಲನಾ ಜಲಾಶಯಕ್ಕೆ ನೀರನ್ನು ತುಂಬಿಸುವ ಯೋಜನೆ ಲೋಕಾರ್ಪಣೆ

– ರಾಜ್ಯದ 424 ಕೆರೆಗಳಿಗೆ ಕಾವೇರಿ, ಭೀಮಾ, ವರದಾ ನದಿಯೂ ಸೇರಿದಂತೆ ವಿವಿಧ ಜಲಮೂಲಗಳಿಂದ ನೀರು ತುಂಬಿಸುವ ಯೋಜನೆಗಳ ಲೋಕಾರ್ಪಣೆ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

error: No Copying!