ದಿನಾಂಕ: 26-05-2026 (ಹಾಯ್ ಉಡುಪಿ ನ್ಯೂಸ್)
ಉಡುಪಿ: ನಗರದ ಅಂಬಾಗಿಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೀನು ಸಾಗಾಟದ ವಾಹನವೊಂದು ಪಲ್ಟಿ ಹೊಡೆದಿದೆ.
ಮೀನು ತುಂಬಿಕೊಂಡಿದ್ದ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಹೆದ್ದಾರಿಯಲ್ಲಿ ವಾಹನದಲ್ಲಿದ್ದ ಮೀನಿನ ಬಾಕ್ಸ್ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ವಲ್ಪ ಸಮಯ ಅಸ್ತವ್ಯಸ್ತಗೊಂಡಿತು.
ಉಡುಪಿ ಟ್ರಾಫಿಕ್ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಸುರಕ್ಷತಾ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ವಾಹನ ದಟ್ಟಣೆ ನಿಯಂತ್ರಿಸಿದ್ದಾರೆ.
