ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ”ಯನ್ನು ಸ್ವೀಕರಿಸಿದರು.
ಸಚಿವರಾದ ಶಿವರಾಜ್ ತಂಗಡಗಿ, ಹೆಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಚಲುವರಾಯಸ್ವಾಮಿ, ಶಾಸಕರಾದ ಕೋನರೆಡ್ಡಿ, ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಹಾಗೂ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್ ನಾಯಕ್, ಸದಸ್ಯರುಗಳಾದ ಶಿವಣ್ಣಗೌಡ, ಚಂದ್ರಪ್ಪ ಯಾದವ, ಪ್ರತಿಭಾ ಕುಳಾಯಿ, ಡಾ.ಸಿ.ಎಂ.ಕುಂದಗೋಳ, ಡಾ.ಜಿ.ಎನ್.ಶ್ರೀಕಂಠಯ್ಯ ಹಾಗೂ ಸದಸ್ಯ ಕಾರ್ಯದರ್ಶಿ ದಯಾನಂದ್, ಆಡಳಿತಾತ್ಮಕ ಕಾರ್ಯದರ್ಶಿ ಊರ್ಮಿಳಾ ಬಿ, ಆಯೋಗದ ವಿಶೇಷ ಸಲಹೆಗಾರರು ಡಿ.ಎನ್.ನಾಯಕ್ ಮತ್ತು ಇತರೆ ತಜ್ಞರು ಈ ವೇಳೆ ಉಪಸ್ಥಿತರಿದ್ದರು.
