Untitled-01-June-2026-at-17.33.04.jpg
Spread the love

ಉಡುಪಿ: ರೌಡಿ ಗಣೇಶ್‌ ಗೂಂಡಾ ಕಾಯ್ದೆಯಡಿ ಬಂಧನ…

ಮಣಿಪಾಲ: ದಿನಾಂಕ :02-06-2026(ಹಾಯ್ ಉಡುಪಿ ನ್ಯೂಸ್) ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಆಸಾಮಿ ಗಣೇಶ್‌ (32),  ನೇತಾಜಿನಗರ 4ನೇ ಅಡ್ಡರಸ್ತೆ, ಬಡಗಬೆಟ್ಟು ಗ್ರಾಮ, ಉಡುಪಿಯ ನಿವಾಸಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ ಜೂನ್ 1, 2026ರಂದು ಈ ಆದೇಶ ಹೊರಡಿಸಲಾಗಿದೆ.

ರೌಡಿ ಗಣೇಶ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಕಳ್ಳತನ ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ 3 ಪ್ರಕರಣಗಳು ಖುಲಾಸೆಯಾಗಿದ್ದು, 4 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ ಹಾಗೂ 2 ಪ್ರಕರಣಗಳು ತನಿಖೆಯ ಹಂತದಲ್ಲಿವೆ.

ಆರೋಪಿಯನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.

error: No Copying!