ಬೆಂಗಳೂರು: ದಿನಾಂಕ:04-06-2026(ಹಾಯ್ ಉಡುಪಿ ನ್ಯೂಸ್) ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳೊಂದಿಗೆ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಜನಕಲ್ಯಾಣ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಿ. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ. ಜನ ಮೆಚ್ಚುವ ಹಾಗೇ ಕೆಲಸ ಮಾಡಿ. ಸರ್ಕಾರಕ್ಕೂ ಒಳ್ಳೆಯ ಹೆಸರು ತನ್ನಿ ಎಂದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಜಿ. ಪರಮೇಶ್ವರ್, ಸಚಿವರಾದ ರಾಮಲಿಂಗಾ ರೆಡ್ಡಿ, ಈಶ್ವರ್ ಖಂಡ್ರೆ, ಯು.ಟಿ. ಖಾದರ್, ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



