ಕಾಪು: ಮೇ೨೫(ಹಾಯ್ ಉಡುಪಿ ನ್ಯೂಸ್) ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಯುವಕ ನನ್ನು ಬಂಧಿಸಿದ ಘಟನೆ ನಡೆದಿದೆ.
ಕಾಪು ಪೊಲೀಸ್ ಠಾಣೆ ಪಿಎಸ್ಐ ಯವರಾದ ಶ್ರೀ ಶೈಲ ಮುರಗೋಡ ಇವರು ದಿನಾಂಕ 23/05/2022 ರಂದು ಸಮಯ 12:00 ಗಂಟೆಗೆ ಠಾಣಾ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಲ್ಲಾರು ಗ್ರಾಮದ ಸ್ವಾಗತ ನಗರ ಸಮೀಪ ಅನುಮಾನಾಸ್ಪದವಾಗಿ ಓರ್ವ ವ್ಯಕ್ತಿ ಕಂಡು ಬಂದಿದ್ದು ಆತನು ಮಾದಕ ಸೇವನೆಯ ನಶೆಯಲ್ಲಿರುವ ಬಗ್ಗೆ ಅನುಮಾನಗೊಂಡು ಅವನ ಬಳಿ ಹೋಗಿ ಅವನ ಹೆಸರು ವಿಳಾಸ ಕೇಳಿ ಅವನನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವನು ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದ ಮೇರೆಗೆ ಆತನನ್ನು ಸ್ಥಳದಲ್ಲಿಯೇ ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಆತನ ಹೆಸರು ಶಬರೀಶ ಎಂದು ತಿಳಿಸಿದ್ದು ಆತನಿಗೆ ಪೊಲೀಸ್ ನೋಟಿಸ್ ನೀಡಿ ವೈದ್ಯಕೀಯ ಪರೀಕ್ಷೆಯ ಬಗ್ಗೆ ಪ್ರೊಫೆಸರ್ ಅಂಡ್ ಹೆಡ್ ಕೆ.ಎಂ.ಸಿ ಪೊರೆನ್ಸಿಕ್ ವಿಭಾಗ ಮಣಿಪಾಲ ಇವರ ಮುಂದೆ ಹಾಜರು ಪಡಿಸಲು ಪೊಲೀಸ್ ಸಿಬ್ಬಂದಿ ಗಳೊಂದಿಗೆ ಕಳಿಸಿದ್ದು ಅದರಂತೆ ಸಿಬ್ಬಂದಿಯವರು ಪ್ರೊಫೆಸರ್ ಅಂಡ್ ಹೆಡ್ ಕೆ.ಎಂ.ಸಿ ಪೊರೆನ್ಸಿಕ್ ವಿಭಾಗ ಮಣಿಪಾಲ ಇವರ ಮುಂದೆ ಹಾಜರು ಪಡಿಸಿದ್ದು, ಪರೀಕ್ಷಿಸಿದ ವೈದ್ಯರು ದಿನಾಂಕ 24/05/2022 ರಂದು ಶಬರೀಶ ಎಂಬಾತನು ಗಾಂಜಾ ಸೇವಿಸಿರುವ ಬಗ್ಗೆ ದೃಢ ಪತ್ರ ನೀಡಿದ್ದು ವೈದ್ಯರ ದೃಢ ಪತ್ರದ ಆಧಾರದಲ್ಲಿ ಶಬರೀಶನ ಮೇಲೆ ಕಾಫು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.