ದಿನಾಂಕ:11-06-2026 (ಹಾಯ್ ಉಡುಪಿ ನ್ಯೂಸ್)
ಉಡುಪಿ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5 ವರ್ಷ )ಎಂದು ಗುರುತಿಸಲಾಗಿದೆ. ಈತ ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದಾನೆ.
ದಕ್ಷ್ ಗೆ ದಿಯಾ (6) ಎಂಬ ಅಕ್ಕ ಇದ್ದು, ಆಕೆ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.
ಪ್ರಶಾಂತ್ ಪೂಜಾರಿ ಅವರು ಕಳೆದ ಸುಮಾರು 13 ವರ್ಷಗಳಿಂದ ಬ್ರಹ್ಮಾವರ ಗಾಂಧಿ ಮೈದಾನದ ಸಮೀಪ ಸಣ್ಣ ಗಾಡಿಯಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದು, ಕುಟುಂಬ ಜೀವನ ಸಾಗಿಸುತ್ತಿದ್ದರು.
ಕೂಡಲೇ ಸ್ಥಳೀಯರ ನೆರವಿನಿಂದ ಮಗುವನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರೂ ಚಿಕಿತ್ಸ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎನ್ನಲಾಗಿದೆ.
