ನವದೆಹಲಿ: ದಿನಾಂಕ:12-06-2026(ಹಾಯ್ ಉಡುಪಿ ನ್ಯೂಸ್) ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ, ಪ್ರಮುಖ ಹಾಗೂ ಮಧ್ಯಮ ನೀರಾವರಿ ಸಚಿವರೊಂದಿಗೆ ಕರ್ನಾಟಕಕ್ಕೆ ಸಂಬಂಧಿಸಿದ ಹಲವು ಪ್ರಮುಖ ಜಲಸಂಪನ್ಮೂಲ ಯೋಜನೆಗಳು ಹಾಗೂ ಬಾಕಿ ಉಳಿದಿರುವ ಪ್ರಸ್ತಾವನೆಗಳ ಕುರಿತು ಸವಿಸ್ತಾರ ಮನವಿಪತ್ರವನ್ನು ಸಲ್ಲಿಸಿದರು.
ಮೇಕೆದಾಟು ಯೋಜನೆ, ಕೆಡಬ್ಲ್ಯುಡಿಟಿ-II (KWDT-II) ತೀರ್ಪಿನ ಅಧಿಸೂಚನೆ, ಅಪರ್ ಭದ್ರಾ ಯೋಜನೆಗೆ ಕೇಂದ್ರ ಸರ್ಕಾರದಿಂದ ಭರವಸೆ ನೀಡಿರುವ ನೆರವಿನ ಬಿಡುಗಡೆ, ಕಳಸಾ-ಬಂಡೂರಿ ಯೋಜನೆಗಳಿಗೆ ಅನುಮೋದನೆ ಸೇರಿದಂತೆ ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ ಇತರೆ ಪ್ರಮುಖ ಪ್ರಸ್ತಾವನೆಗಳಿಗೆ ಅಗತ್ಯ ಅನುಮತಿಗಳನ್ನು ಶೀಘ್ರವಾಗಿ ನೀಡುವಂತೆ ಹಾಗೂ ಅಗತ್ಯ ಸಹಕಾರವನ್ನು ಒದಗಿಸುವಂತೆ ಮುಖ್ಯಮಂತ್ರಿ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಈ ಯೋಜನೆಗಳು ಕರ್ನಾಟಕದ ನೀರಾವರಿ ಅಭಿವೃದ್ಧಿ, ಕುಡಿಯುವ ನೀರಿನ ಭದ್ರತೆ, ಬರ ನಿರ್ವಹಣೆ ಹಾಗೂ ರಾಜ್ಯದ ಲಕ್ಷಾಂತರ ರೈತರ ಕಲ್ಯಾಣಕ್ಕೆ ಅತ್ಯಂತ ಮಹತ್ವದ್ದಾಗಿವೆ.



