n715928970178136133972020882d4612f1c4640a5a42124e40326ce749fcd600805ee33a0e47735dceb23e.jpg
Spread the love

ದಿನಾಂಕ: 13-06-2026(ಹಾಯ್ ಉಡುಪಿ ನ್ಯೂಸ್)ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಶನಿವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಶೀರೂರು ಮಠಾಧೀಶ  ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದರು.

ಕೃಷ್ಣ ಮಠದಲ್ಲಿ ದೇವರ ನೈವೇದ್ಯಕ್ಕಾಗಿ ಹೊಸದಾಗಿ ನಿರ್ಮಿಸಿದ ಅಡುಗೆ ಕೋಣೆಯನ್ನು (ಪಾಯದ ಕೋಣೆ) ಸಚಿವೆ ಉದ್ಘಾಟಿಸಿದರು.

ಶೀರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು, ಶಾಸಕ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ,,ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.

error: No Copying!