IMG-20260613-WA0018-1306x1536.jpg
Spread the love

ದಿನಾಂಕ:13-06-2026 (ಹಾಯ್ ಉಡುಪಿ ನ್ಯೂಸ್)

ಮಣಿಪಾಲ : ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಎಂಬವನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ ಜೂನ್ 12ರಂದು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಅಧೀಕ್ಷಕರು, ಉಡುಪಿ ಜಿಲ್ಲೆ ಸಲ್ಲಿಸಿದ ವರದಿಯ ಆಧಾರದ ಮೇಲೆ ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು (ಐಜಿಪಿ), ಮಂಗಳೂರು ಬಂಧನ ಆದೇಶ ಹೊರಡಿಸಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗಿದೆ.

ಜಗದೀಶ ಪೂಜಾರಿ ವಿರುದ್ಧ ಮಣಿಪಾಲ ಪೊಲೀಸ್ ಠಾಣೆ ಹಾಗೂ ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ 3 ಪ್ರಕರಣಗಳು ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದ 2 ಪ್ರಕರಣಗಳು ದಾಖಲಾಗಿವೆ.
ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಒಂದು ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದ್ದು, ಉಳಿದ ಎರಡು ಪ್ರಕರಣಗಳು ತನಿಖೆಯಲ್ಲಿವೆ. ಸೇವನೆಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲೂ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.

error: No Copying!