ಹಿರಿಯಡ್ಕ: ಮೇ೨೫(ಹಾಯ್ ಉಡುಪಿ ನ್ಯೂಸ್) ಬಸ್ ನಿಲ್ದಾಣದ ಹಿಂಭಾಗದಲ್ಲಿ ರಾಜಾರೋಷವಾಗಿ ಮಟ್ಕಾ ದಂಧೆ ನಡೆಸುತ್ತಿದ್ದವನನ್ನು ಬಂಧಿಸಿದ ಘಟನೆ ನಡೆದಿದೆ.
ದಿನಾಂಕ 25/05/2022 ರಂದು ಹಿರಿಯಡ್ಕ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಅನಿಲ್ ಬಿ ಎಂ ಇವರಿಗೆ ಪೆರ್ಡೂರು ಗ್ರಾಮದ ಮುತ್ತುರ್ಮೆ ಸಾರ್ವಜನಿಕ ಬಸ್ ನಿಲ್ದಾಣದ ಹಿಂಭಾಗ ಒಬ್ಬ ವ್ಯಕ್ತಿ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ಬಂದ ಮಾಹಿತಿ ಮೇರೆಗೆ ಕೂಡಲೇ ಸ್ಥಳಕ್ಕೆ ದಾಳಿ ನಡೆಸಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಉಡುಪಿ ಜಿಲ್ಲೆ , ಪೆರ್ಡೂರು ಗ್ರಾಮದ ಮುತ್ತುರ್ಮೆ ಲಕ್ಷ್ಮೀ ನಿಲಯ ನಿವಾಸಿ ಸತೀಶ್ ನಾಯ್ಕ್ (೪೭)ಎಂಬಾತನನ್ನು ವಶಕ್ಕೆ ಪಡೆದು ಬಂಧಿಸಿ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ರೂಪಾಯಿ 980/- ಮತ್ತು ಮಟ್ಕಾ ನಂಬ್ರ ಬರೆದ ಚೀಟಿ- 1, ಬಾಲ್‌ಪೆನ್-1 ನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.