ಸಾಹಿತಿ, ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.
‘ಲಂಕೇಶ್ ಪತ್ರಿಕೆ’ ಯ ಯಶಸ್ಸಿನ ಹಿಂದೆ ಹಾಗೂ ಪಿ. ಲಂಕೇಶ್ ಅವರ ಬದುಕಿನ ಏಳುಬೀಳುಗಳಲ್ಲಿ ಇಂದಿರಾ ಲಂಕೇಶ್ ಬೆಂಬಲವಾಗಿ ನಿಂತಿದ್ದರು. ಬರವಣಿಗೆಯಲ್ಲೂ ತೊಡಗಿಸಿಕೊಂಡಿದ್ದ ಅವರು, ಪುಸ್ತಕ ಪ್ರಕಟಣೆಯ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಅವರ ಅಗಲಿಕೆ ಕುಟುಂಬದವರಿಗೆ ಮಾತ್ರವಲ್ಲದೆ ಸಾಹಿತ್ಯ ಹಾಗೂ ಸಾಂಸ್ಕೃತಿಕ ವಲಯಕ್ಕೂ ತುಂಬಲಾರದ ನಷ್ಟವಾಗಿದೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಈ ದುಃಖ ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಂ.ಬಿ ಪಾಟೀಲ್ ಹೇಳಿದರು.

