ಶಿರ್ವಾ:ಮೇ೨೫(ಹಾಯ್ ಉಡುಪಿ ನ್ಯೂಸ್) ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನನ್ನು ಬಂಧಿಸಿದ ಘಟನೆ ನಡೆದಿದೆ.
ದಿನಾಂಕ 25/05/2022 ರಂದು ಬೆಳಗ್ಗೆ 08:30 ಗಂಟೆಗೆ ಕಾಪು ತಾಲೂಕು ಶಿರ್ವಾ ಗ್ರಾಮದ ಶಿರ್ವ ಮಸೀದಿಯ ಬಳಿ ಇರುವ ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ಮಾದಕ ವಸ್ತು ಗಾಂಜಾವನ್ನು ಸಿಗರೇಟ್‌ನಲ್ಲಿ ಸೇರಿಸಿ ಸೇದುತ್ತಿದ್ದ ಮೊಹಮ್ಮದ್ ನಿಸ್ಸಾರ್(34), ವಿನಯನಗರ ಬೆಳಪು ಗ್ರಾಮ, ಕಾಪು ತಾಲೂಕು, ಉಡುಪಿ ಜಿಲ್ಲೆ ಎಂಬಾತನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ನಿಸ್ಸಾರ್ ಗಾಂಜಾ ಮಾದಕ ವಸ್ತು ಸೇವನೆ ಮಾಡಿರುವ ಬಗ್ಗೆ ವೈದ್ಯಕೀಯ ವರದಿ ಬಂದಿದ್ದು ಈ ಬಗ್ಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಆತನ ಮೇಲೆ ಪ್ರಕರಣ ದಾಖಲಾಗಿರುತ್ತದ.