ಬಿಡದಿ: ದಿನಾಂಕ:16-06-2026(ಹಾಯ್ ಉಡುಪಿ ನ್ಯೂಸ್)
ಬಿಡದಿಯ ಖಾಸಗಿ ಹೋಟೆಲ್’ನಲ್ಲಿಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು, ಜೂನ್ 18ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿಕಟಪೂರ್ವ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಸೇರಿದಂತೆ ಸಚಿವರು ಹಾಗೂ ಶಾಸಕರು ಉಪಸ್ಥಿತರಿದ್ದರು.

