ಬೆಂಗಳೂರು: ದಿನಾಂಕ:16-06-2026(ಹಾಯ್ ಉಡುಪಿ ನ್ಯೂಸ್) ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯ ಕುರಿತು ಪೂರ್ವಭಾವಿ ಸಭೆ ನಡೆಸಿ ಅಗತ್ಯ ಸಿದ್ಧತೆಗಳು ಸೇರಿದಂತೆ ಹಲವು ಮಹತ್ವದ ವಿಷಯಗಳನ್ನು ಚರ್ಚಿಸಿದರು.
ಈ ವೇಳೆ ಸಚಿವರು, ಶಾಸಕರು ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.
ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ ಪ್ರಮುಖ ನಿರ್ಧಾರಗಳು ಇಂತಿವೆ
– ನೂತನವಾಗಿ ನಿರ್ಮಾಣವಾಗುತ್ತಿರುವ ಕೆಂಪೇಗೌಡ ಬಡಾವಣೆಯಲ್ಲಿ ಜೂನ್ 27ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ
– ಕೆಂಪೇಗೌಡ ಬಡಾವಣೆಯಲ್ಲಿ ನೂತನ ರಸ್ತೆ ಕಾಮಗಾರಿ ಉದ್ಘಾಟನೆ
– ಬಿಡಿಎ ವತಿಯಿಂದ ಅಧ್ಯಕ್ಷರಾದ ಎನ್.ಎ ಹ್ಯಾರಿಸ್ ಅವರ ನೇತೃತ್ವದಲ್ಲಿ 15 ಲಕ್ಷ ಗಿಡ ನೆಡುವ ಕಾರ್ಯಕ್ರಮ
– 224 ಕ್ಷೇತ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಣೆಗೆ ತಲಾ ₹ 1 ಲಕ್ಷ ಅನುದಾನ
– ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಜಯಂತಿ ಆಚರಣೆಗೆ ತಲಾ ₹ 1 ಲಕ್ಷ ಅನುದಾನ
– ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಥೀಮ್ ಪಾರ್ಕ್ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಚಿವರಾದ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ತಯಾರಿ
– ಕೆಂಪೇಗೌಡ ಟೌನ್ ಪ್ಲಾನಿಂಗ್ ಕಾಲೇಜು ನಿರ್ಮಾಣಕ್ಕೆ ಸಿದ್ಧತೆ
– ಕೆಂಪೇಗೌಡರು ಬೆಂಗಳೂರು ನಗರ ಹಾಗೂ ರಾಜ್ಯದ ಆಸ್ತಿ. ಎಲ್ಲಾ ಧರ್ಮ, ಜಾತಿ, ಸಂಘಟನೆಗಳ ಜೊತೆಗೆ ಜಯಂತಿ ಆಚರಣೆ ನಡೆಯಲಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.


