unnamed-1.webp
Spread the love

ಕಾರ್ಕಳ: ದಿನಾಂಕ 17/06/2026 (ಹಾಯ್ ಉಡುಪಿ ನ್ಯೂಸ್) ಅವರು ಕಸಬಾ ಗ್ರಾಮದ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಯನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.

ಹೆಬ್ರಿ ತಾಲೂಕು ವರಂಗ ಗ್ರಾಮದ ನಿವಾಸಿ ಉಮೇಶ್‌ (50) ಎಂಬವರು ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಬಸ್‌ನಿಲ್ದಾಣದ ಬಳಿ ಇರುವ ವಿಜಯ ವೈನ್‌ಶಾಪ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಸಂಬಂಧಿಸಿದ ಇಲಾಖೆಯಿಂದ ಅನುಮತಿ ಪಡೆದುಕೊಳ್ಳದೇ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿರುವುದಾಗಿ ಸಾರ್ವಜನಿಕ ದೂರಿನ ಮೇರೆಗೆ ಆರೋಪಿ ಉಮೇಶ್ ನನ್ನು ಬಂಧಿಸಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಕಲಂ: 15 (A) KE ACT ರಂತೆ ಪ್ರಕರಣ ದಾಖಲಾಗಿದೆ.

error: No Copying!