ದಿನಾಂಕ:19-06-2026(ಹಾಯ್ ಉಡುಪಿ ನ್ಯೂಸ್)
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ಜೂನ್ 21 ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಿ, ಜಿಲ್ಲೆಯ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಆಗದಂತೆ ಪಾರದರ್ಶಕವಾಗಿ ಆಯೋಜಿಸಲು ಅಗತ್ಯವಿರುವ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಯವರು ಸೂಚನೆಯನ್ನು ನೀಡಿದರು.
