images-5.jpeg
Spread the love

ಬೆಂಗಳೂರು: ಮುಖ್ಯಮಂತ್ರಿ ಡಿಕೆಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಸಾರ್ವಜನಿಕರ ಕುಂದುಕೊರತೆಗಳು, ಸಾರ್ವಜನಿಕ ಹೋರಾಟಗಳ ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ” ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ. ಪ್ರತ್ಯೇಕ ಸಚಿವರಿಗೆ ಇದರ ಜವಾಬ್ದಾರಿ ವಹಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ತಮಗೆ ಜವಾಬ್ದಾರಿ ನೀಡಲಾಗಿರುವ ಜಿಲ್ಲೆಯ ಕ್ಷೇತ್ರಗಳಲ್ಲಿ ವಾರಕ್ಕೆ ಒಮ್ಮೆ ಸ್ಥಳೀಯ ಶಾಸಕರೊಂದಿಗೆ ಈ ಇಲಾಖೆ ಮೂಲಕ ಜನಸ್ಪಂದನ ಸಭೆಗಳನ್ನು ನಡೆಸಬೇಕು. ಆನಂತರ ಅದನ್ನು ಪರಿಶೀಲಿಸುವ ಕೆಲಸ ಮಾಡಲಾಗುವುದು.

ಇದರೊಂದಿಗೆ ವಿದ್ಯುತ್ ಸಂಪರ್ಕ, ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅನುಮೋದನೆ, 620 ಬಸ್ ಖರೀದಿಗೆ ಅನುಮೋದನೆ, ಕರ್ನಾಟಕದ ವಿದ್ಯಾರ್ಥಿಗಳಿಗೆ ದೆಹಲಿಯಲ್ಲಿ ಕರ್ನಾಟಕ ಭವನ, ದೆಹಲಿಯಲ್ಲಿ ಸದೃಢ ಕಾನೂನು ವಿಭಾಗ, ಕೇಂದ್ರದ ಯೋಜನೆಗಳನ್ನು ಕರ್ನಾಟಕಕ್ಕೆ ತರಲು ಅಧಿಕಾರಿಗಳ ತಂಡ ನಿಯೋಜನೆ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಳಸಾಪೂರ ಗ್ರಾಮದಲ್ಲಿ ವಸತಿ ಯೋಜನೆಯನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ಸೇರಿದಂತೆ ಹಲವಾರು ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

error: No Copying!