IMG-20260622-WA0025-1536x864.jpg
Spread the love

ದಿನಾಂಕ:22-06-2026 (ಹಾಯ್ ಉಡುಪಿ ನ್ಯೂಸ್)

ಉಡುಪಿ: ನಗರದ ಹೃದಯ ಭಾಗದಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಯಿತು.

ಬೆದರಿಕೆ ಸಂದೇಶದ ಮಾಹಿತಿ ದೊರಕುತ್ತಿದ್ದಂತೆ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ನ್ಯಾಯಾಲಯದ ಸಂಕೀರ್ಣಕ್ಕೆ ಆಗಮಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ . ನ್ಯಾಯಾಲಯದ ಆವರಣ ಹಾಗೂ ಕಟ್ಟಡದ ವಿವಿಧ ಭಾಗಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಬೆದರಿಕೆ ಸಂದೇಶದ ಮೂಲ ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

error: No Copying!