HLbDohdasAA6YxZ.jpg
Spread the love

ಬೆಂಗಳೂರು: ದಿನಾಂಕ:22-06-2026 (ಹಾಯ್ ಉಡುಪಿ ನ್ಯೂಸ್) 2024-25ನೇ ಸಾಲಿನಲ್ಲಿ ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಗಳಿಸಿದ ನಿವ್ವಳ ಲಾಭದಲ್ಲಿ 143.12 ಕೋಟಿ ರೂ.ಗಳ ಲಾಭಾಂಶದ (ಡಿವಿಡೆಂಡ್) ಚೆಕ್‌ ಅನ್ನು ಸಚಿವರಾದ ಶ್ರೀ ಎಂ.ಬಿ. ಪಾಟೀಲ ಅವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ಸಂಸ್ಥೆ ವತಿಯಿಂದ 3 ಕೋಟಿ ರೂ.ಗಳ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು.

ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಖುಷ್ಬೂ ಗೋಯಲ್, ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಚಿದಾನಂದ್ ಅವರು ಉಪಸ್ಥಿತರಿದ್ದರು.

error: No Copying!