ದಿನಾಂಕ:23-06-2026 (ಹಾಯ್ ಉಡುಪಿ ನ್ಯೂಸ್)
ಕಾಪು: ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಜೆಯ ವೇಳೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಅವರು ಪ್ರಯಾಣಿಸುತ್ತಿದ್ದ ಕಾರು ಸಹಿತ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಅವರಿದ್ದ ಕಾರು ಹಾಗೂ ಇತರ ಎರಡು ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ . ಅಪಘಾತದಲ್ಲಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಈ ವೇಳೆ ಇನ್ನೊಂದು ಕಾರಿನಲ್ಲಿ ರೋಗಿಯೊಬ್ಬರು ಸಂಚರಿಸುತ್ತಿದ್ದು ಅವರಿಗೂ ಸಣ್ಣಪುಟ್ಟ ಗಾಯವಾಗಿದೆ .
