ಕನಕಪುರ: ದಿನಾಂಕ:23-06-2026(ಹಾಯ್ ಉಡುಪಿ ನ್ಯೂಸ್) ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಲಿಂಗೈಕ್ಯ ಪರಮಪೂಜ್ಯ ತ್ರಿವಿಧ ದಾಸೋಹಿಗಳಿಗೆ ಭಾವಪೂರ್ಣ ನಮನವನ್ನು ಸಲ್ಲಿಸಿದರು.
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನಕಪುರದ ದೇಗುಲ ಮಠದ ಮಠಾಧೀಶರು, ಪರಮಪೂಜ್ಯರಾದ ನಿ.ಪ್ರ.ಸ್ವ ಡಾ. ಶ್ರೀ ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಭಾವಪೂರ್ಣ ನಮನ ಸಲ್ಲಿಸಿದರು.
ಮಾತೃ ಹೃದಯಿ, ಸರಳತೆಯ ಸಾಕರಮೂರ್ತಿ, ಸಹಸ್ರಾರು ವಿದ್ಯಾರ್ಥಿಗಳ ದಿವ್ಯಜ್ಯೋತಿ ಆಗಿದ್ದ ಪರಮಪೂಜ್ಯರ ಅಗಲಿಕೆ ಕನಕಪುರದ ಮಹಾಜನತೆಗೆ ಹಾಗೂ ಭಕ್ತ ವೃಂದಕ್ಕೆ ಅಪಾರ ದುಃಖವನ್ನುಂಟು ಮಾಡಿದೆ.
ಶ್ರೀಮಠದ ಪೀಠಾಧ್ಯಕ್ಷರಾಗಿ ಅವರು ಧರ್ಮ, ಸಂಸ್ಕೃತಿ, ಶಿಕ್ಷಣ ಹಾಗೂ ಸಮಾಜ ಸೇವೆಯ ಮೂಲಕ ಅಪಾರ ಕೊಡುಗೆ ನೀಡಿದ್ದರು. ಪೂಜ್ಯರ ಅಗಲಿಕೆ ಭಕ್ತ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದ್ದು, ಭಗವಂತನು ಅವರ ಪವಿತ್ರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಹಾಗೂ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

