ಬೆಂಗಳೂರು: ದಿನಾಂಕ:24-06-2026(ಹಾಯ್ ಉಡುಪಿ ನ್ಯೂಸ್) ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡಲು ಸರಕಾರ ಮಹತ್ವದ ಹೆಜ್ಜೆಯನ್ನು ಇಟ್ಟಿದೆ ಎಂದು ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಉಚಿತ ಬಸ್ ಪಾಸ್ ಯೋಜನೆಯನ್ನು ಜಾರಿ ಮಾಡಿದ್ದು, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದರ ಜೊತೆಗೆ ಆರ್ಥಿಕ ಭಾರ ಇಳಿಸಲು ನೆರವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು.
