ಉಡುಪಿ: ದಿನಾಂಕ:24-06-2026 (ಹಾಯ್ ಉಡುಪಿ ನ್ಯೂಸ್)
ನಗರದ ಅಲಂಕಾರ್ ಟಾಕೀಸ್ ಮುಂಭಾಗದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪಕ್ಕದಲ್ಲಿ ದುಬೈ ಉದ್ಯಮಿ ಬಿ.ಆರ್ ಶೆಟ್ಟಿ ಯವರು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕಟ್ಟಲು ನಿರ್ಮಿಸಿದ ಹೊಂಡವನ್ನು ಮುಚ್ಚುವ ಸಲುವಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆಯನ್ನು ನಡೆಸಿ ಹೊಂಡ ಮುಚ್ಚಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.
