ದಿನಾಂಕ:25-06-2026 (ಹಾಯ್ ಉಡುಪಿ ನ್ಯೂಸ್)
ಉಡುಪಿ: ಖಾಸಗಿ ಶಾಲೆಯೊಂದರ ಬಸ್‌ವೊಂದು ಇಂದು ಬೆಳಿಗ್ಗೆ ಮಣಿಪಾಲದ ಐನಾಕ್ಸ್ (ಸಿನಿಗ್ಯಾಲಕ್ಸಿ) ಮುಂಭಾಗ ಅಪಘಾತಕ್ಕೀಡಾಗಿ ಡಿವೈಡರ್ ಮೇಲೇರಿ ನಿಂತ ಘಟನೆ ಬೆಳಿಗ್ಗೆ ನಡೆದಿದೆ.
ಮಣಿಪಾಲ ಟ್ರಾಫಿಕ್ ಸಿಗ್ನಲ್‌ನಿಂದ ಲಕ್ಷ್ಮೀಂದ್ರನಗರ ಕಡೆಗೆ ಸಾಗುವ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿಯ ಡಿವೈಡರ್ ಮೇಲೇರಿ ನಿಂತಿದ್ದು, ಅಪಘಾತದ ರಭಸಕ್ಕೆ ತಡೆಬೇಲಿ ಹಾಗೂ ಬಸ್‌ನ ಮುಂಭಾಗ ಹಾನಿಗೊಳಗಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ. ಇದರಿಂದ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.
ಅಪಘಾತದ ಕಾರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
