IMG-20260625-WA0028-1156x1536.jpg
Spread the love

ದಿನಾಂಕ:25-06-2026(ಹಾಯ್ ಉಡುಪಿ ನ್ಯೂಸ್)

ಉಡುಪಿ: ಮಣಿಪಾಲದ ಈಶ್ವರನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಯುವಕನಿಗೆ ಗಂಭೀರ ಗಾಯಗೊಳಿಸಿದ ಪ್ರಕರಣದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಜೂನ್ 19ರಂದು ರಾತ್ರಿ ಕರ್ವಾಲು ಅಲೆವೂರು ನಿವಾಸಿ ಅಭಿಷೇಕ್ ನಾಯಕ್ (21) ಎಂಬವರು ಸ್ಕೂಟಿಯಲ್ಲಿ ಕೆಳಪರ್ಕಳದ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ, ಮಣಿಪಾಲದ ಸಾಯಿ ಸಾಗರ್ ಹೋಟೆಲ್ ಎದುರಿನ ಯು-ಟರ್ನ್ ಬಳಿ ಎಂಐಟಿ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಆರೋಪಿಯಾಗಿರುವ ಕಾರ್ಕಳ ತಾಲೂಕಿನ ಮುಡಾರು ನಿವಾಸಿ ಸಮೇಗ್ದ್ ಎಲ್.ಜೆ. (25) ಮದ್ಯಪಾನ ಮಾಡಿ ಅಜಾಗರೂಕತೆಯಿಂದ ಕಾರು ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಅಭಿಷೇಕ್ ನಾಯಕ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಎರಡೂ ವಾಹನಗಳು ಜಖಂಗೊಂಡಿವೆ.ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು.

ಈ ಸಂಬಂಧ ಜೂನ್ 22ರಂದು ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

error: No Copying!