ಬೆಂಗಳೂರು: ದಿನಾಂಕ: 26-06-2026 ( ಹಾಯ್ ಉಡುಪಿ ನ್ಯೂಸ್) ನಾಡಪ್ರಭು ಕೆಂಪೇಗೌಡರ ಜಯಂತಿಯ ದಿನದಂದು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಎಂ. ಕೃಷ್ಣ ಅವರ ಹೆಸರಿನ ನೂತನ ದಶಪಥ ರಸ್ತೆಯನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಹೇಳಿದರು.
ಕಡಬಗೆರೆ ಕ್ರಾಸ್‌ನಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣದವರೆಗೆ ಸಂಪರ್ಕ ಕಲ್ಪಿಸುವ ಈ ಭವ್ಯ ರಸ್ತೆಯು ಸಂಪೂರ್ಣವಾಗಿ ಟೋಲ್ ಮುಕ್ತವಾಗಿದೆ. ಬೆಂಗಳೂರಿನ ಮೂಲಸೌಕರ್ಯಕ್ಕೆ ದೊಡ್ಡ ಕೊಡುಗೆಯಾಗಿರುವ ಈ ರಸ್ತೆ, ನಗರದ ಸಂಚಾರವನ್ನು ಮತ್ತಷ್ಟು ಸುಗಮಗೊಳಿಸಲಿದೆ.
ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಎಂ. ಕೃಷ್ಣ ಅವರು ಬೆಂಗಳೂರನ್ನು ಜಾಗತಿಕ ಮಾಹಿತಿ ತಂತ್ರಜ್ಞಾನ (IT) ನಕ್ಷೆಯಲ್ಲಿ ಗುರುತಿಸುವಂತೆ ಮಾಡಿದ ದೂರದೃಷ್ಟಿಯ ನಾಯಕರು, ತಮ್ಮ ಆಡಳಿತಾವಧಿಯಲ್ಲಿ ನಗರದ ಆಧುನಿಕ ಮೂಲಸೌಕರ್ಯ ಮತ್ತು ತಂತ್ರಜ್ಞಾನದ ಬೆಳವಣಿಗೆಗೆ ಅವರು ಬಲವಾದ ಅಡಿಪಾಯ ಹಾಕಿಕೊಟ್ಟರು. ಬೆಂಗಳೂರಿನ ಅಭಿವೃದ್ಧಿಗೆ ಶ್ರಮಿಸಿದ ಅವರ ಹೆಸರನ್ನು ಈ ನೂತನ ದಶಪಥ ರಸ್ತೆಗೆ ನಾಮಕರಣ ಮಾಡಲಾಗಿದ್ದು, ಅವರ ದೂರದೃಷ್ಟಿ ಮತ್ತು ಸಾಧನೆಗಳು ನಮಗೆ ಸದಾ ಪ್ರೇರಣೆಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

