20260629_010157.jpg
Spread the love

ಬೆಂಗಳೂರು: ದಿನಾಂಕ:29-06-2026(ಹಾಯ್ ಉಡುಪಿ ನ್ಯೂಸ್)

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೋ ಅಭಿಯಾನಕ್ಕೆ  ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಮತ್ತು ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಚಾಲನೆ ನೀಡಿದರು.

ಆ ನಂತರ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೇಶದ ಆರೋಗ್ಯವಂತ ಭವಿಷ್ಯ ನಮ್ಮ ಮಕ್ಕಳ ಕೈಯಲ್ಲಿದೆ. ಹಾಗಾಗಿ, 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೇ ಪೋಲಿಯೋ ಲಸಿಕೆ ಕೊಡಿಸುವುದು ಪ್ರತಿಯೊಬ್ಬ ಪೋಷಕರ ಆದ್ಯ ಕರ್ತವ್ಯವಾಗಿದೆ. ‘ಎರಡು ಹನಿ ಜೀವ ರಕ್ಷಕ’ ಎಂಬುದನ್ನು ಮನದಟ್ಟು ಮಾಡಿಕೊಂಡು, ಪೋಲಿಯೋ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ನಾವೆಲ್ಲರೂ ಒಟ್ಟಾಗಿ ಕೈಜೋಡಿಸೋಣ ಎಂದು ಮುಖ್ಯಮಂತ್ರಿ ಕರೆ ನೀಡಿದರು.

error: No Copying!