ದಿನಾಂಕ:29-06-2026 (ಹಾಯ್ ಉಡುಪಿ ನ್ಯೂಸ್)
ಉಡುಪಿ: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಪದೇ ಪದೇ ಮೂರು ಬಾರಿ ಹುಸಿ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಧೀಶರು, ವಕೀಲರು, ನ್ಯಾಯಾಲಯದ ಸಿಬ್ಬಂದಿ ಹಾಗೂ ಕಕ್ಷಿದಾರರ ಸುರಕ್ಷತೆಯ ದೃಷ್ಟಿಯಿಂದ ಉಡುಪಿ ವಕೀಲರ ಸಂಘದ ಪ್ರತಿನಿಧಿಗಳು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಭೇಟಿ ನೀಡಿ ಭದ್ರತೆ ಹೆಚ್ಚಿಸುವಂತೆ ಮನವಿ ಸಲ್ಲಿಸಿದರು.
ಪೊಲೀಸ್ ಉಪ ಅಧೀಕ್ಷಕರಿಗೆ ಸಲ್ಲಿಸಿದ ಮನವಿಯಲ್ಲಿ, ನ್ಯಾಯಾಲಯ ಆವರಣದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸುವುದು, ಬೆದರಿಕೆ ಪ್ರಕರಣದ ಸಮಗ್ರ ತನಿಖೆ ನಡೆಸುವುದು ಹಾಗೂ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಮನವಿಗೆ ಸ್ಪಂದಿಸಿದ ಪೊಲೀಸ್ ಉಪ ಅಧೀಕ್ಷಕರು, ಪ್ರಕರಣದ ಕುರಿತು ಶೀಘ್ರ ಮತ್ತು ಸಮಗ್ರ ತನಿಖೆ ನಡೆಸಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು .
ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿ ಹಾಗೂ ವಕೀಲರಾದ ವೈ.ಟಿ. ರಾಘವೇಂದ್ರ, ಅಖಿಲ್ ಬಿ. ಹೆಗ್ಡೆ, ಗುರುರಾಜ್ ಜಿ.ಎಸ್., ಅನಿಲ್ ಪೂಜಾರಿ, ಕವಿತಾ, ನಾಗರಾಜ್ ಕೆ., ಬಾನುಮತಿ ನಾಯರಿ ಸೇರಿದಂತೆ ಸಂಘದ ಇತರ ಸದಸ್ಯರು ಉಪಸ್ಥಿತರಿದ್ದರು.
