HL-E3B1boAAC7cM.jpg
Spread the love

ಬೆಂಗಳೂರು: ದಿನಾಂಕ:29-06-2026 (ಹಾಯ್ ಉಡುಪಿ ನ್ಯೂಸ್) ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್‌ಗಳ ಒಕ್ಕೂಟದ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಹಾಗೂ ಇಂಧನ ಸಚಿವರಾದ ಶ್ರೀ ಕೆ. ಜೆ. ಜಾರ್ಜ್‌ ಅವರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ರಾಜ್ಯದ ಅಭಿವೃದ್ಧಿಯಲ್ಲಿ ವಿದ್ಯುತ್‌ ವಲಯದ ಪಾತ್ರ ಮತ್ತು ನೌಕರರ ಶ್ರಮ ಅತ್ಯಂತ ಪ್ರಮುಖವಾದದ್ದು. ಕಾರ್ಯಕ್ರಮದಲ್ಲಿ ನೆರೆದಿದ್ದ ನೌಕರ ಬಂಧುಗಳ ಆತ್ಮೀಯ ಸತ್ಕಾರ ಹಾಗೂ ಪ್ರೀತಿಯ ಅಭಿನಂದನೆಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು,  ನಮ್ಮ ಸರ್ಕಾರ ನೌಕರರ ಹಿತರಕ್ಷಣೆ ಮತ್ತು ಇಲಾಖೆಯ ಬಲವರ್ಧನೆಗೆ ಸದಾ ಬದ್ಧವಾಗಿರುತ್ತದೆ ಎಂದು ಅಭಿನಂದನೆ ಸ್ವೀಕರಿಸಿ ಹೇಳಿದರು..

ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಕೆ. ಬಲರಾಮ್, ಎಂಜಿನಿಯರುಗಳ ಸಂಘದ ಅಧ್ಯಕ್ಷ ಸಿ. ಬಸವಣ್ಣ ಅವರು ಸೇರಿದಂತೆ ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.

error: No Copying!