ಬೆಂಗಳೂರು: ದಿನಾಂಕ: 30-06-2026 (ಹಾಯ್ ಉಡುಪಿ ನ್ಯೂಸ್) ರಾಜ್ಯ ಚುನಾವಣಾ ಆಯೋಗವು ರಾಜ್ಯಾದ್ಯಂತ ಇಂದಿನಿಂದ ಜುಲೈ 29 ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಸುತ್ತಿದ್ದು, ಮನೆ-ಮನೆ ಸಮೀಕ್ಷೆ (Enumeration) ಪ್ರಕ್ರಿಯೆ ಇಂದು ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಸದಾಶಿವನಗರದ ನಿವಾಸದಲ್ಲಿ ತಮ್ಮ ಕುಟುಂಬ ಸದಸ್ಯರೊಂದಿಗೆ ಬಿಎಲ್‌ಓ ಗಳಿಗೆ ಅಗತ್ಯ ದಾಖಲೆಗಳು ಹಾಗೂ ಮಾಹಿತಿ ನೀಡಿ, ನೋಂದಣಿ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿದರು.
ರಾಜ್ಯದ ಪ್ರತಿಯೊಬ್ಬ ಮತದಾರ ಕೂಡ ತಮ್ಮ ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಅಗತ್ಯ ಮಾಹಿತಿಗಳನ್ನು ಒದಗಿಸಿ, ಮತದಾರರ ಪಟ್ಟಿಯಿಂದ ತಮ್ಮ ಹೆಸರು ಕೈತಪ್ಪದಂತೆ ಖಾತ್ರಿಪಡಿಸಿಕೊಳ್ಳಬೇಕು.
ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದಲ್ಲಿ ಪ್ರತಿ ಮತವೂ ಅಮೂಲ್ಯ. ನಮ್ಮ ಸಂವಿಧಾನಬದ್ಧ ಕರ್ತವ್ಯವನ್ನು ನಿಭಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ.
ಪ್ರತಿಯೊಬ್ಬರೂ ತಪ್ಪದೇ ಎಸ್‌ಐಆರ್ ನಲ್ಲಿ ಭಾಗವಹಿಸಿ, ಅಗತ್ಯ ಮಾಹಿತಿ ಒದಗಿಸಿ, ಮತದಾನದ ಹಕ್ಕನ್ನು ಕಾಪಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಕರೆ ನೀಡಿದ್ದಾರೆ.


