ಶಿರ್ವ:ಮೇ೨೮(ಹಾಯ್ ಉಡುಪಿ ನ್ಯೂಸ್) ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿದ ಘಟನೆ ನಡೆದಿದೆ.
ದಿನಾಂಕ 24/05/2022 ರಂದು ಬೆಳಗ್ಗೆ 08:30 ಗಂಟೆಗೆ ಕಾಪು ತಾಲೂಕು ಶಿರ್ವಾ ಗ್ರಾಮದ ಶಿರ್ವಾ ಮಸೀದಿ ಬಸ್ ನಿಲ್ದಾಣದ ಬಳಿ ಇರುವ ಸಾರ್ವಜನಿಕ ಬಸ್ಸು ನಿಲ್ದಾಣದಲ್ಲಿ ಶಿರ್ವ ಮಸೀದಿ ಬಳಿಯ ನಿವಾಸಿ ಮೊಹಮ್ಮದ್ ಶೋಯಬ್ ( 24 ) ಎಂಬಾತನು ಮಾದಕ ವಸ್ತು ಗಾಂಜಾವನ್ನು ಸಿಗರೇಟ್‌ನಲ್ಲಿ ಸೇರಿಸಿ ಸೇದುತ್ತಿದ್ದವನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆತನು ಗಾಂಜಾ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ವರದಿ ಬಂದಿದ್ದು, ಆತನ ವಿರುದ್ಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ದಿನಾಂಕ 24/05/2022 ರಂದು ಬೆಳಗ್ಗೆ 10:30 ಗಂಟೆಗೆ ಕಾಪು ತಾಲೂಕು ಕಳತ್ತೂರು ಗ್ರಾಮದ ಚಂದ್ರನಗರ ಬಸ್ ನಿಲ್ದಾಣದ ಬಳಿ ಚಂದ್ರ ನಗರ ,ಜನತಾ ಕಾಲೋನಿ ನಿವಾಸಿ ಅಸ್ರಫ್ ( 37) ಎಂಬವನು ಮಾದಕ ವಸ್ತು ಗಾಂಜಾವನ್ನು ಸಿಗರೇಟ್‌ನಲ್ಲಿ ಸೇರಿಸಿ ಸೇದುತ್ತಿದ್ದವನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆತನು ಗಾಂಜಾ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ವರದಿ ಬಂದಿದ್ದು, ಆತನ ವಿರುದ್ಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.