HMNCGQoaQAAc9dB.jpg
Spread the love

ಬೆಂಗಳೂರು: ದಿನಾಂಕ:02-06-2026(ಹಾಯ್ ಉಡುಪಿ ನ್ಯೂಸ್) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ವಿಧಾನ ಪರಿಷತ್‌ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ಅಧಿಕಾರ ಸ್ವೀಕರಿಸಿದ
ನೂತನ ಸದಸ್ಯರಿಗೆ ಶುಭಹಾರೈಸಿದರು.

ರಾಜ್ಯದ ಅಭಿವೃದ್ಧಿ, ಜನಪರ ಆಡಳಿತ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿಧಾನ ಪರಿಷತ್‌ ನೂತನ ಶಾಸಕರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲಿ ಹಾಗೂ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಶ್ರೀ ಡಾ.ಜಿ ಪರಮೇಶ್ವರ್‌, ವಿಧಾನ ಪರಿಷತ್‌ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ, ವಿಧಾನಸಭೆಯ ಉಪಸಭಾಧ್ಯಕ್ಷರಾದ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಹಾಗೂ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಉಪಸ್ಥಿತರಿದ್ದರು.

error: No Copying!