ಕೋಟ: ದಿನಾಂಕ 05/07/2026 (ಹಾಯ್ ಉಡುಪಿ ನ್ಯೂಸ್) ಸಾಸ್ತಾನ ಜಂಕ್ಷನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಹಾಂತೇಶ ಜಾಬಗೌಡ ಅವರು ಬಂಧಿಸಿದ್ದಾರೆ .
ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಹಾಂತೇಶ್ ಜಾಬಗೌಡ ಅವರು ದಿನಾಂಕ:03-07-2026 ರಂದು ರೌಂಡ್ಸ್ ನಲ್ಲಿರುವಾಗ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಗ್ರಾಮದ ಸಾಸ್ತಾನ ಜಂಕ್ಷನ್ ಸಮೀಪ ಇರುವ ಮಲ್ಯಾಡಿ ಚಿಕ್ಕು ಸ್ಟೋರ್ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ಆಡುತ್ತಿರುವುದಾಗಿ ಬಂದ ಸಾರ್ವಜನಿಕ ಮಾಹಿತಿಯ ಮೇರೆಗೆ ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ದಾಳಿ ನಡೆಸಿದ್ದಾರೆ.
ದಾಳಿ ನಡೆಸಿದಾಗ ಸ್ಥಳದಲ್ಲಿದ್ದ ಸಾರ್ವಜನಿಕರು ಓಡಿ ಹೋಗಿದ್ದು ಶಶಿಧರ(30), ಪಾಂಡೇಶ್ವರ ಗ್ರಾಮ ಸಾಸ್ತಾನ ಎಂಬಾತನನ್ನು ಬಂಧಿಸಿ ವಶಕ್ಕೆ ಪಡೆದು ವಿಚಾರಿಸಿದಾಗ ತಾನು ವಂಡ್ಸೆಯ ಸಂಜೀವ ಪೂಜಾರಿ ತಿಳಿಸಿದಂತೆ ಮಟ್ಕಾ ಜುಗಾರಿ ಆಟವಾಡಿಸುತ್ತಿರುವುದಾಗಿ ತಿಳಿಸಿದ್ದು . ಆತನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ಬಾಲ್ ಪೆನ್ ,ಮಟ್ಕಾ ಚೀಟಿ, ನಗದು 1,065/- ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಕಲಂ: 78(i)(iii) KP ACT ಮತ್ತು ಕಲಂ: 112 BNS ರಂತೆ ಪ್ರಕರಣ ದಾಖಲಾಗಿದೆ.
