ಬೆಂಗಳೂರು: ದಿನಾಂಕ :06-07-2026(ಹಾಯ್ ಉಡುಪಿ ನ್ಯೂಸ್) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 14 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಎಐಸಿಸಿ ಅಧ್ಯಕ್ಷರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಲೋಕಾರ್ಪಣೆ ಗೊಳಿಸಿದರು.
ಆ ನಂತರ ಮಾತನಾಡಿದ ಮುಖ್ಯಮಂತ್ರಿಗಳು ಬಾಬಾಸಾಹೇಬರು ಆಶಿಸಿದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಸಿಗುವಂತಾಗಬೇಕು. ಈ ಪ್ರತಿಮೆಯು ನಮಗೆ ಸದಾ ಸಂವಿಧಾನದ ಆಶಯಗಳನ್ನು ನೆನಪಿಸುವ ಮತ್ತು ಆ ದಾರಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲು ಪ್ರೇರೇಪಿಸುವ ಸಾಂಕೇತಿಕ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೆ.ಎಚ್. ಮುನಿಯಪ್ಪ, ಶ್ರೀ ಕೆ.ಜೆ. ಜಾರ್ಜ್, ಶಾಸಕರಾದ ಶರತ್ ಬಚ್ಚೇಗೌಡ, ಆನೇಕಲ್ ಶಿವಣ್ಣ, ಎನ್. ಶ್ರೀನಿವಾಸ್, ಧೀರಜ್ ಮುನಿರಾಜು, ಶ್ರೀನಿವಾಸ್, ಸಂಸದರಾದ ಡಾ. ಕೆ. ಸುಧಾಕರ್, ಎಂಎಲ್‌ಸಿ ರವಿ ಮತ್ತಿತರರು ಉಪಸ್ಥಿತರಿದ್ದರು.



