ಬೆಂಗಳೂರು: ದಿನಾಂಕ:14-07-2026(ಹಾಯ್ ಉಡುಪಿ ನ್ಯೂಸ್) ಮುಜರಾಯಿ ದೇವಸ್ಥಾನಗಳಲ್ಲಿ ಭಕ್ತರು ಸಮರ್ಪಿಸುವ ಕಾಣಿಕೆ, ಹುಂಡಿ ಹಣ ಹಾಗೂ ಚಿನ್ನಾಭರಣಗಳ ಸುರಕ್ಷತೆಯನ್ನು ಖಚಿತಪಡಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಇಂದು ಹೇಳಿದ್ದಾರೆ. ಕಳ್ಳತನ ಹಾಗೂ ದುರುಪಯೋಗಕ್ಕೆ ಆಸ್ಪದವಿಲ್ಲದಂತೆ ತಂತ್ರಜ್ಞಾನದ ಆಧಾರದಲ್ಲಿ ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ ಎಂದು ಹೇಳಿದರು.
ಇದಕ್ಕಾಗಿ ಹುಂಡಿಗಳ ಮೇಲೆ ನಿರಂತರ ವೆಬ್‌ಕ್ಯಾಮ್ ಕಣ್ಗಾವಲು ಇಡಲಾಗುತ್ತಿದ್ದು, ಕಾಣಿಕೆ ಎಣಿಕೆ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಲಾಗಿದೆ. ಜೊತೆಗೆ, ವ್ಯವಹಾರಗಳನ್ನು ಡಿಜಿಟಲೀಕರಣಗೊಳಿಸಲು ಕ್ಯೂಆರ್ ಕೋಡ್ ವ್ಯವಸ್ಥೆ ತರಲಾಗಿದ್ದು, ಉನ್ನತ ಅಧಿಕಾರಿಗಳ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಇಡೀ ವ್ಯವಸ್ಥೆ ಕಾರ್ಯನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ..
